ADVERTISEMENT

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಸಿಇಸಿ ಸಭೆ ನಡೆಸಿದ ಕಾಂಗ್ರೆಸ್‌

ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ(ಸಿಇಸಿ) ಸಭೆ ನಡೆಸಿತು.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2023, 9:14 IST
Last Updated 13 ಅಕ್ಟೋಬರ್ 2023, 9:14 IST
<div class="paragraphs"><p>ಚುನಾವಣಾ ಸಮಿತಿ&nbsp;ಸಭೆ ನಡೆಸಿದ ಕಾಂಗ್ರೆಸ್‌</p></div>

ಚುನಾವಣಾ ಸಮಿತಿ ಸಭೆ ನಡೆಸಿದ ಕಾಂಗ್ರೆಸ್‌

   

(ಚಿತ್ರ ಕೃಪೆ–Congress (@INCIndia)

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಇಂದು (ಅಕ್ಟೋಬರ್‌ 13) ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಸಿತು.

ADVERTISEMENT

ಮೂಲಗಳ ಪ್ರಕಾರ, ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸುಮಾರು 140 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಭೆಯಲ್ಲಿ ಅಂತಿಮಗೊಳಿಸುವ ಸಾಧ್ಯತೆಯಿದೆ. ಭಾನುವಾರ ಆ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಸಿಇಸಿ ಸಭೆಯ ನಂತರ ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ಕೂಡ ನಡೆಯಲಿದೆ. ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಉಳಿದ ಹೆಸರುಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಸಂಸದರಾದ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.