ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್‌ನ ಬಂಡಾಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಂಗಳವಾರ ಕಾಂಗ್ರೆಸ್ ತೊರೆದಿದ್ದಾರೆ.
ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.
ಮಧ್ಯಪ್ರದೇಶದ ರಾಜ ಮನೆತನದವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ತನ್ನತ್ತ ಸೆಳೆದಿರುವ ಬಿಜೆಪಿ, ರಾಜ್ಯಸಭೆ ಟಿಕೆಟ್ ನೀಡುವುದಾಗಿ ಗೊತ್ತಾಗಿದೆ.
'ಮುಂದೆ ಸಾಗಲು ನನಗೆ ಇದು ಸೂಕ್ತ ಸಮಯ'ಎಂದು ಜ್ಯೋತಿರಾದಿತ್ಯ ಸಿಂಧಿಯಾ ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶಿಸಿದೆ.
ಜ್ಯೋತಿರಾದಿತ್ಯ ಸಿಂದಿಯಾ ಅವರು ರಾಜಸ್ಥಾನದ ಬಿಜೆಪಿ ನಾಯಕಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಸೋದರಳಿಯ (ಅಣ್ಣನ ಮಗ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.