ADVERTISEMENT

ಟಿಎಂಸಿ ಸೇರಲಿರುವ ಕಾಂಗ್ರೆಸ್‌ ನಾಯಕ ಕೀರ್ತಿ ಆಜಾದ್‌

ಪಿಟಿಐ
Published 23 ನವೆಂಬರ್ 2021, 6:06 IST
Last Updated 23 ನವೆಂಬರ್ 2021, 6:06 IST
ಕೀರ್ತಿ ಆಜಾದ್‌
ಕೀರ್ತಿ ಆಜಾದ್‌   

ನವದೆಹಲಿ: ಕಾಂಗ್ರೆಸ್‌ ನಾಯಕ ಕೀರ್ತಿ ಆಜಾದ್‌ ಅವರು ದೆಹಲಿಯಲ್ಲಿ ಇಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷವನ್ನು ಸೇರುವರು ಎಂದು ಪಕ್ಷದ ಮೂಲಗಳು ಹೇಳಿವೆ.

ಟಿಎಂಸಿ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಈಗ ದೆಹಲಿಯಲ್ಲಿದ್ದಾರೆ. ಪ್ರತಿ ಸಲ ಅವರು ದೆಹಲಿಗೆ ಹೋದಾಗ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದರು. ಆದರೆ ಈ ಬಾರಿ ಸೋನಿಯಾ ಅವರನ್ನು ಭೇಟಿ ಆಗದಿರುವ ಸಾಧ್ಯತೆಗಳು ಇವೆ ಎಂದು ಮೂಲಗಳು ತಿಳಿಸಿವೆ.

2015ರ ಡಿಸೆಂಬರ್‌ನಲ್ಲಿ ದೆಹಲಿ ಆಡಳಿತದಲ್ಲಿ ಮತ್ತು ಜಿಲ್ಲಾ ಕ್ರಿಕೆಟ್‌ ಅಸೋಸಿಯೇಶನ್‌ನಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರಗಳು ನಡೆದಿವೆ ಎಂದು ಆರೋಪ ಮಾಡಿದ್ದಕ್ಕೆ ಮತ್ತು ಆಗಿನ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರನ್ನು ಟೀಕಿಸಿದ್ದಕ್ಕೆ ಕೀರ್ತಿ ಆಜಾದ್‌ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು. 2018ರಲ್ಲಿ ಅವರು ಕಾಂಗ್ರೆಸ್‌ ಸೇರಿದ್ದರು.

ADVERTISEMENT

ಬಿಹಾರದ ದರ್ಭಾಂಗ ಕ್ಷೇತ್ರದಿಂದ ಆಜಾದ್‌ ಅವರು ಲೋಕಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.