ADVERTISEMENT

ಆಗಸ್ಟ್‌ 1ರ ಒಳಗೆ ಸರ್ಕಾರಿ ಬಂಗ್ಲೆ ತೆರವುಗೊಳಿಸುವಂತೆ ಪ್ರಿಯಾಂಕಾ ಗಾಂಧಿಗೆ ಸೂಚನೆ

ಏಜೆನ್ಸೀಸ್
Published 1 ಜುಲೈ 2020, 16:27 IST
Last Updated 1 ಜುಲೈ 2020, 16:27 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ನವದೆಹಲಿ: ಆಗಸ್ಟ್ 1ರ ಒಳಗೆ ದೆಹಲಿಯಲ್ಲಿನ ಸರ್ಕಾರಿ ಬಂಗ್ಲೆ ತೆರವುಗೊಳಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸರ್ಕಾರ ಸೂಚಿಸಿದೆ.

ಪ್ರಿಯಾಂಕಾ ಅವರು ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ಭದ್ರತೆ ಹೊಂದಿರುವುದಿಲ್ಲ. ಹೀಗಾಗಿ ಈ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಬಂಗ್ಲೆ ಸೌಕರ್ಯವನ್ನೂ ಪಡೆಯಲಾಗದು ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಹೇಳಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಇದ್ದ ಎಸ್‌ಪಿಜಿ ಭದ್ರತೆಯನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು.

ADVERTISEMENT

‘ಎಸ್‌ಪಿಜಿ ಭದ್ರತೆ ಹಿಂತೆಗೆದುಕೊಂಡ ನಂತರ ಮತ್ತು ಗೃಹ ಸಚಿವಾಲಯವು ಝಡ್ ಪ್ಲಸ್ ಶ್ರೇಣಿಯ ಭದ್ರತೆ ಕಲ್ಪಿಸಿದ ಬಳಿಕ ಭದ್ರತಾ ನೆಲೆಯಲ್ಲಿ ಸರ್ಕಾರಿ ವಸತಿ ಸೌಕರ್ಯಗಳನ್ನು ಒದಗಿಸಲು ಅವಕಾಶವಿಲ್ಲ. ಹೀಗಾಗಿ ಲೋಧಿ ಎಸ್ಟೇಟ್‌ನಲ್ಲಿರುವ ಟೈಪ್ 6ಬಿ, ಮನೆ ಸಂಖ್ಯೆ 35 ಸೌಲಭ್ಯ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ನಿಮಗೆ ದೊರೆಯುವುದಿಲ್ಲ’ ಎಂದು ಪ್ರಿಯಾಂಕಾ ಅವರಿಗೆ ಬರೆದಿರುವ ಪತ್ರದಲ್ಲಿ ಸಚಿವಾಲಯ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.