ADVERTISEMENT

ವೈರತ್ವ, ಹಿಂಸೆ, ಸೇಡಿಗೆ ಭಾರತದಲ್ಲಿ ಜಾಗವಿಲ್ಲ: ಪ್ರಿಯಾಂಕಾ ಗಾಂಧಿ

ಏಜೆನ್ಸೀಸ್
Published 30 ಡಿಸೆಂಬರ್ 2019, 11:30 IST
Last Updated 30 ಡಿಸೆಂಬರ್ 2019, 11:30 IST
ಕಾಂಗ್ರೆಸ್‌ ನಾಯಕಿ ಪ್ರಿಯಂಕಾ ಗಾಂಧಿ
ಕಾಂಗ್ರೆಸ್‌ ನಾಯಕಿ ಪ್ರಿಯಂಕಾ ಗಾಂಧಿ   

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಅಲ್ಲಿನ ಪೊಲೀಸರು ತಪ್ಪು ಕಾರ್ಯಗಳಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಇಂದು ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಜನರ ಮೇಲೆ ಕ್ರೂರ ಹಲ್ಲೆ ನಡೆಸಿದ್ದಾರೆ‘ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮೇಲೆ ಉತ್ತರ ಪ್ರದೇಶ ಪೊಲೀಸರು ಹಲ್ಲೆ ಮಾಡಿದ್ದಾರೆಂದು ಎರಡು ದಿನಗಳ ಹಿಂದೆ ಗಂಭೀರ ಆರೋಪ ಮಾಡಿದ್ದ ಪ್ರಿಯಾಂಕಾ, ’ಈ ದೇಶದಲ್ಲಿ ವೈರತ್ವ, ಹಿಂಸೆ ಮತ್ತು ಸೇಡಿಗೆ ಜಾಗವಿಲ್ಲ‘ ಎಂದಿದ್ದಾರೆ.

ADVERTISEMENT

ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಖಂಡಿಸಿರುವ ಪ್ರಿಯಾಂಕಾ, ‘ನನ್ನ ಸುರಕ್ಷತೆ ಮುಖ್ಯ ಸಮಸ್ಯೆ ಅಲ್ಲ. ನಾವು ಸಾಮಾನ್ಯ ನಾಗರಿಕರ ಸುರಕ್ಷತೆ ಬಗ್ಗೆ ಮಾತನಾಡುತ್ತಿದ್ದೇವೆ. ನಮಗೆ ತಿಳಿದಿರುವ ಹಾಗೆ 5500 ಜನರನ್ನು ಬಂಧಿಸಲಾಗಿದೆ. ಹಲವರನ್ನು ಜೈಲಿಗೆ ತಳ್ಳಿ ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ. ಉತ್ತರ ಪ್ರದೇಶ ಪೊಲೀಸರು ಮತ್ತು ಅಲ್ಲಿನ ಆಡಳಿತ ತಪ್ಪು ಕಾರ್ಯಗಳಲ್ಲಿ ನಿರತವಾಗಿವೆ‘ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.