ADVERTISEMENT

ಕಚ್ಚಾ ತೈಲ ಬೆಲೆ ಇಳಿಕೆ: ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ರಾಹುಲ್ ಗಾಂಧಿ ಒತ್ತಾಯ

ಪಿಟಿಐ
Published 5 ಜನವರಿ 2022, 10:18 IST
Last Updated 5 ಜನವರಿ 2022, 10:18 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಕಚ್ಚಾ ತೈಲದ ಬೆಲೆಯು ಒಂದು ಗ್ಯಾಲನ್‌ಗೆ 7.3 ಡಾಲರ್‌ನಷ್ಟು ಕುಸಿದಿದೆ. ಹೀಗಾಗಿ ತೈಲ ಕಂಪನಿಗಳು ಬೆಲೆಗಳನ್ನು ಕಡಿಮೆ ಮಾಡಿದರೆ ಪೆಟ್ರೋಲ್ ಬೆಲೆ ಲೀಟರ್‌ಗೆ 8 ರೂಪಾಯಿಗಳಷ್ಟು ಕುಸಿಯುತ್ತದೆ ಎಂಬ ಪತ್ರಿಕೆಯೊಂದರ ವರದಿಯನ್ನು ಟ್ಯಾಗ್ ಮಾಡಿದ್ದಾರೆ.

'ಇಷ್ಟುದಿನ ಬೆಲೆ ಏರಿಕೆಯಾಗಿದ್ದು ಸಾಕು, ಕನಿಷ್ಠ ಈಗಲಾದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಗ್ಗಿಸಿ' ಎಂದಿರುವ ರಾಹುಲ್, 'PetrolDieselPrice' ಮತ್ತು 'FuelLoot' ಎಂದು ಹ್ಯಾಷ್‌ಟ್ಯಾಗ್‌ ಹಾಕಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ರಣದೀಪ್ ಸುರ್ಜೇವಾಲ ಮಾತನಾಡಿ, 'ಲೂಟಿಯನ್ನು ನಿಲ್ಲಿಸಿ ಮತ್ತು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆಯನ್ನು ಕಡಿಮೆ ಮಾಡಿ' ಎಂದಿದ್ದಾರೆ.

'ಲೂಟಿಗಾರ ಮೋದಿ ಸರ್ಕಾರವು ಏಕೆ ಬಡವರ, ಮಧ್ಯಮ ವರ್ಗದ ಮತ್ತು ಸಂಬಳದಾರರ ಜೇಬಿನಿಂದ ಡಕಾಯಿತಿ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಸದ್ಯ ಚುನಾವಣೆಗಳು ಮುಗಿದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿ' ಎಂದಿದ್ದಾರೆ.

ಇಂಧನ ಬೆಲೆ ಏರಿಕೆ ಮತ್ತು ಪೆಟ್ರೋಲ್, ಡೀಸೆಲ್ ಮೇಲಿಕ ಅಧಿಕ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.