ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂತಾಪ ಸೂಚಿಸಿದ್ದಾರೆ.
‘ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ. ಪುನೀತ್ ಅವರು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ' ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ... ಕ್ರೂರ ವಿಧಿಯು ಪುನೀತ್ ಅವರನ್ನು ನಮ್ಮಿಂದ ಕಿತ್ತುಕೊಂಡಿದೆ: ಪ್ರಧಾನಿ ಮೋದಿ ಸಂತಾಪ
ಪುನೀತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.