ADVERTISEMENT

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋವಿಡ್-19 ದೃಢ

ಏಜೆನ್ಸೀಸ್
Published 20 ಏಪ್ರಿಲ್ 2021, 10:34 IST
Last Updated 20 ಏಪ್ರಿಲ್ 2021, 10:34 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿರುವುದಾಗಿ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

'ಸೌಮ್ಯ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ನಡೆಸಿದ ಪರೀಕ್ಷೆಯಲ್ಲಿ ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ' ಎಂದು 50 ವರ್ಷದ ರಾಹುಲ್ ಗಾಂಧಿ ಬರೆದಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ 88 ವರ್ಷದ ಅವರಿಗೆ ಕೋವಿಡ್‌-19 ದೃಢಪಟ್ಟಿತ್ತು. ಅವರು ಕೋವಿಡ್ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.