ಗುವಾಹಟಿ: ಕಾಂಗ್ರೆಸ್‌ನ ಅಸ್ಸಾಂ ಘಟಕದ ಮಾಜಿ ಅಧ್ಯಕ್ಷ ರಿಪುನ್ ಬೋರಾ ಭಾನುವಾರ ಪಕ್ಷಕ್ಕೆ ರಾಜೀನಾಮೆ ನೀಡಿದರು.
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ, ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದರು. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಬೋರಾ ಟಿಎಂಸಿ ಸೇರ್ಪಡೆಯಾದರು.
‘ಒಬ್ಬ ಧೀಮಂತ ಮತ್ತು ನುರಿತ ರಾಜಕಾರಣಿ ನಮ್ಮ ಕುಟುಂಬವನ್ನು ಸೇರಿದ್ದಾರೆ. ನಿಮ್ಮನ್ನು (ರಿಪುನ್ ಬೋರಾ) ಪಕ್ಷಕ್ಕೆ ಸ್ವಾಗತಿಸಲು ನಾವು ಹರ್ಷಗೊಂಡಿದ್ದೇವೆ. ಜನರ ಯೋಗಕ್ಷೇಮಕ್ಕಾಗಿ ನಿಮ್ಮ ಜತೆ ಕೆಲಸ ಮಾಡುವುದನ್ನು ಎದುರುನೋಡುತ್ತಿದ್ದೇವೆ’ ಎಂದು ಅಭಿಷೇಕ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
‘ಬಿಜೆಪಿ ಜತೆ ರಹಸ್ಯ ಒಪ್ಪಂದ’: ‘ಬಿಜೆಪಿ ವಿರುದ್ಧ ಹೋರಾಡುವ ಬದಲು ಒಂದು ವರ್ಗದ ಹಿರಿಯ ನಾಯಕರು ಆ ಪಕ್ಷದ ಸರ್ಕಾರದ, ಮುಖ್ಯವಾಗಿ ಮುಖ್ಯಮಂತ್ರಿಗಳ ಜತೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಬೋರಾ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.