ADVERTISEMENT

ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ ಅಥವಾ ರಾಹುಲ್‌ ಆಯ್ಕೆ ಸಾಧ್ಯತೆ: ಶಶಿ ತರೂರ್‌

ಪಿಟಿಐ
Published 17 ಅಕ್ಟೋಬರ್ 2023, 7:03 IST
Last Updated 17 ಅಕ್ಟೋಬರ್ 2023, 7:03 IST
ಶಶಿ ತರೂರ್‌
ಶಶಿ ತರೂರ್‌   

ತಿರುವನಂತಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಬ್ಬರಲ್ಲಿ, ಒಬ್ಬರು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಪಕ್ಷದಿಂದ ಆಯ್ಕೆಯಾಗಬಹುದು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್‌ ಅಭಿಪ್ರಾಯ ಪಟ್ಟಿದ್ದಾರೆ.

ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ 2024ರಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್‌ ಗಾಂಧಿ ಇಬ್ಬರಲ್ಲಿ ಒಬ್ಬರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಪಕ್ಷ ಘೋಷಿಸಬಹುದು. ಈ ಮೂಲಕ ಖರ್ಗೆ ದಲಿತ ಸಮುದಾಯದಲ್ಲಿ ಮೊದಲ ಪ್ರಧಾನಿಯಾಗಬಹುದು. ಅಥವಾ ಕಾಂಗ್ರೆಸ್‌ ಪಕ್ಷವನ್ನು ಉತ್ತಮವಾಗಿ ಆಡಳಿತ ನಡೆಸಿಕೊಂಡು ಬಂದಿರುವ ಗಾಂಧಿ ಕುಟುಂಬದ ಉತ್ತರಾಧಿಕಾರಿಯಾಗಿ ರಾಹುಲ್‌ ಮುಂದುವರೆಯಬಹುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಿಯಾದವರು ಎಲ್ಲರನ್ನೂ ಸಮಾನವಾಗಿ ಕಾಣುವುದು ಮುಖ್ಯ. ಪಕ್ಷದಿಂದ ಆಯ್ಕೆಯಾಗುವ ಅಭ್ಯರ್ಥಿಯು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ವಿಶ್ವಾಸ ‌ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.