ADVERTISEMENT

ಸೋನಿಯಾ ಗಾಂಧಿ ಅನಾರೋಗ್ಯದ ಬಗ್ಗೆ ಆಸ್ಪತ್ರೆ ನೀಡಿದ ಮಾಹಿತಿಯೇನು?

ಏಜೆನ್ಸೀಸ್
Published 6 ಜನವರಿ 2023, 13:01 IST
Last Updated 6 ಜನವರಿ 2023, 13:01 IST
   

ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದ ಕುರಿತು ಗಂಗಾರಾಮ್‌ ಆಸ್ಪತ್ರೆ ಕೊನೆಗೂ ಮಾಹಿತಿ ನೀಡಿದ್ದು, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು ಎಂಬ ವಿಷಯವನ್ನು ಬಹಿರಂಗಪಡಿಸಿದೆ.

ಸೋನಿಯಾ ಆರೋಗ್ಯ ಈಗ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗಂಗಾರಾಮ್‌ ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ.

‘ಉಸಿರಾಟದ ತೊಂದರೆಯಿಂದ ಸೋನಿಯಾ ಗಾಂಧಿ ಬುಧವಾರ ಆಸ್ಪತ್ರೆ ಸೇರಿದ್ದರು. ಶ್ವಾಸಕೋಶದಲ್ಲಿನ ವೈರಾಣು ಸೋಂಕಿನಿಂದ ಬಳಲುತ್ತಿದ್ದರು. ಈಗ ಆರೋಗ್ಯ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ’ ಎಂದು ಆಸ್ಪತ್ರೆ ಅಧ್ಯಕ್ಷ ಡಾ.ಅಜಯ್‌ ಸ್ವರೂಪ್‌ ಹೇಳಿದ್ದಾರೆ.

ADVERTISEMENT

‘ಶ್ವಾಸಕೋಶ ಸೋಂಕಿಗೆ ಸಂಬಂಧಿತ ವಿಭಾಗದಲ್ಲಿ ಸೋನಿಯಾ ದಾಖಲಾಗಿದ್ದರು. ಡಾ.ಅನುಪ್‌ ಬಸು ತಂಡ ಸೋನಿಯಾ ಅವರಿಗೆ ಚಿಕಿತ್ಸೆ ನೀಡುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರದಿಂದಲೇ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬುಧವಾರ ಮಧ್ಯಾಹ್ನದ ವೇಳೆ ಅವರನ್ನು ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾರತ್‌ ಜೋಡೋ ಯಾತ್ರೆಯಲ್ಲಿದ್ದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರ ಪ್ರದೇಶ ಪ್ರವೇಶಿಸಿದ್ದ ಯಾತ್ರೆಯನ್ನು ಅರ್ಧಕ್ಕೆ ಬಿಟ್ಟು ಆಸ್ಪತ್ರೆಗೆ ಧಾವಿಸಿದ್ದರು.

ರಾಹುಲ್‌ ಯಾತ್ರೆಗೆ ಮರಳಿದಿರುವುದು ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಹೆಚ್ಚಿಸಿತ್ತು. ಈಗ ಆಸ್ಪತ್ರೆ ಸೋನಿಯಾ ಆರೋಗ್ಯದ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.