ADVERTISEMENT

ರಾಹುಲ್‌, ಪ್ರಿಯಾಂಕಾರನ್ನು ದೆಹಲಿಗೆ ವಾಪಸ್ಸು ತಲುಪಿಸಿದ ಯುಪಿ ಪೊಲೀಸರು

ಹತ್ರಾಸ್‌ ಅತ್ಯಾಚಾರ ಪ್ರಕರಣ

ಏಜೆನ್ಸೀಸ್
Published 1 ಅಕ್ಟೋಬರ್ 2020, 14:31 IST
Last Updated 1 ಅಕ್ಟೋಬರ್ 2020, 14:31 IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ   

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಹತ್ರಾಸ್‌ಗೆ ತೆರಳುತ್ತಿದ್ದಾಗ ವಶಕ್ಕೆ ಪಡೆಯಲಾಗಿದ್ದರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿಬಿಡುಗಡೆಗೊಂಡಿದ್ದು,ಅವರನ್ನುಉತ್ತರ ಪ್ರದೇಶ ಪೊಲೀಸರು ದೆಹಲಿಗೆ ವಾಪಸ್ಸು ತಲುಪಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಪಕ್ಷದ ಕಾರ್ಯಕರ್ತರೊಂದಿಗೆ ಗುರುವಾರ ಹತ್ರಾಸ್‌ಗೆ ತೆರಳುತ್ತಿದ್ದ ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರ ವಾಹನಗಳನ್ನು ಉತ್ತರ ಪ್ರದೇಶ ಪೊಲೀಸರು ನಾಯ್ಡಾ ಬಳಿ ತಡೆದಿದ್ದರು.

ಆ ನಂತರ ರಾಹುಲ್‌ ಗಾಂಧಿ ಅವರು ನೂರಾರು ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲೇ ಹತ್ರಾಸ್‌ಗೆ ತೆರಳಲು ಮುಂದಾದರು. ಆ ಸಮಯದಲ್ಲಿ ಪೊಲೀಸರು ರಾಹುಲ್‌ ಮತ್ತು ಪ್ರಿಯಾಂಕಾ ಅವರನ್ನು ಬಂಧಿಸಿ ಕರೆದೊಯ್ದಿದ್ದರು.

ADVERTISEMENT

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ಘಟನೆ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಆದರೆ, ಸಾರ್ವಜನಿಕರ ಆಕ್ರೋಶದ ನಂತರ ಪ್ರತಿಕ್ರಿಯಿಸಿದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.