ಕಾಫಿ ಬೆಳೆಗಾರರ ಸಮಸ್ಯೆ ಆಲಿಸಿದ ಸೋನಿಯಾ, ಪ್ರಿಯಾಂಕಾ
ಚಿತ್ರಕೃಪೆ: INCIndia
ವಯನಾಡ್: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ವಯನಾಡ್‌ಗೆ ಭೇಟಿ ನೀಡಿದ್ದು ಕಾಫಿ ಬೆಳೆಗಾರರೊಂದಿಗೆ ಸಂವಾದ ನಡೆಸಿದ್ದಾರೆ.
ಚಂದೇಲ್‌ನ ಕಾಫಿ ಸಂಶೋಧನಾ ಪ್ರಯೋಗಾಲಯಕ್ಕೆ ಭೇಟಿ ನೀಡಿ, ಪ್ರಯೋಗಾಲಯದ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು.
ಜತೆಗೆ. ಸ್ಥಳೀಯ ಕಾಫಿ ಬೆಳೆಯುವ ರೈತರೊಂದಿಗೆ ಸಂವಹನ ನಡೆಸಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಹವಾಮಾನ ಬದಲಾವಣೆಯ ಸವಾಲುಗಳು, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸೇರಿ ಹಲವು ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಪ್ರಿಯಾಂಕಾ ಗಾಂಧಿ ಪದ್ಮಶ್ರೀ ಪುರಸ್ಕೃತ ರೈತ ಚೆರುವಯಲ್ ರಾಮನ್ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ವಿವಿಧ ತಳಿಯ ಭತ್ತದ ಬಗ್ಗೆ, ಕೃಷಿಯ ಬಗ್ಗೆ ಮಾತುಕತೆ ನಡೆಸಿದ್ದರು. ರಾಮನ್ ಜತೆಗೆ ಗದ್ದೆಗಳಲ್ಲಿ ಓಡಾಡಿ ಸ್ಥಳೀಯ ಸಂಪ್ರದಾಯದ ಬಗ್ಗೆಯೂ ಮಾಹಿತಿ ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.