ADVERTISEMENT

ಮಧ್ಯಪ್ರದೇಶ: ಕಾಂಗ್ರೆಸ್ ನಾಯಕ, ಕೇಂದ್ರ ಮಾಜಿ ಸಚಿವ ಪಚೌರಿ ಬಿಜೆಪಿ ಸೇರ್ಪಡೆ

ಪಿಟಿಐ
Published 9 ಮಾರ್ಚ್ 2024, 6:47 IST
Last Updated 9 ಮಾರ್ಚ್ 2024, 6:47 IST
<div class="paragraphs"><p>ಮಧ್ಯ‍ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಅವರು ಸುರೇಶ್ ಪಚೌರಿ&nbsp; (ಎಡದಿಂದ ಮೊದಲನೆಯವರು) ಅವರನ್ನು ಬಿಜೆಪಿಗೆ ಬರಮಾಡಿಕೊಂಡರು. </p></div>

ಮಧ್ಯ‍ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಅವರು ಸುರೇಶ್ ಪಚೌರಿ  (ಎಡದಿಂದ ಮೊದಲನೆಯವರು) ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

   

–ಪಿಟಿಐ ಚಿತ್ರ

ಭೋಪಾಲ್: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಿನಲ್ಲಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಆಘಾತ ಎದುರಾಗಿದೆ. ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜೂಖೇಡಿ ಮತ್ತು ಇತರ ಹಲವರು ಶನಿವಾರ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರಲ್ಲಿ ಮಾಜಿ ಶಾಸಕರು ಕೂಡ ಇದ್ದಾರೆ.

ADVERTISEMENT

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ಮಧ್ಯಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ವಿ.ಡಿ. ಶರ್ಮ ಮತ್ತು ಪಕ್ಷದ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಸಮ್ಮುಖದಲ್ಲಿ ಇವರು ಬಿಜೆಪಿ ಸೇರಿದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರಲ್ಲಿ ಮಾಜಿ ಶಾಸಕರಾದ ಸಂಜಯ್ ಶುಕ್ಲಾ, ಅರ್ಜುನ್ ಪಾಲಿಯಾ, ವಿಶಾಲ್ ಪಟೇಲ್ ಅವರೂ ಇದ್ದಾರೆ. 

ಪಚೌರಿ ಅವರು ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದರು. ಅವರು ರಕ್ಷಣಾ ಖಾತೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ಸಿನಿಂದ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ಬಿಜೆಪಿ ಸೇರಿದ ನಂತರ ಕಾಂಗ್ರೆಸ್ ಉದ್ದೇಶಿಸಿ ವಾಗ್ದಾಳಿ ನಡೆಸಿದ ಪಚೌರಿ, ‘ಕಾಂಗ್ರೆಸ್ ಪಕ್ಷವು ಹಿಂದೆ ಜಾತಿರಹಿತ ಹಾಗೂ ವರ್ಗರಹಿತ ಸಮಾಜದ ಬಗ್ಗೆ ಮಾತನಾಡುತ್ತಿತ್ತು. ಆದರೆ ಈಗ ಅದು ದೇಶವನ್ನು ಜಾತಿಯ ನೆಲೆಯಲ್ಲಿ ಒಡೆಯುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.

ರಾಜೂಖೇಡಿ ಅವರು ಬುಡಕಟ್ಟು ಸಮುದಾಯದ ಪ್ರಮುಖ ನಾಯಕರಲ್ಲಿ ಒಬ್ಬರು. 1998, 1999 ಮತ್ತು 2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.