ADVERTISEMENT

ಕಾಂಗ್ರೆಸ್‌ನಿಂದ ಅಂಬೇಡ್ಕರ್ ಸ್ಮರಣೆ: ಯೂಟ್ಯೂಬ್‌ ಚಾನಲ್‌ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 12:16 IST
Last Updated 6 ಡಿಸೆಂಬರ್ 2022, 12:16 IST
ಸಂಸತ್‌ ಆವರಣದಲ್ಲಿರುವ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಲು ಮಂಗಳವಾರ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಾಂಗ್ರೆಸ್ ನಾಯಕಿ, ಸೋನಿಯಾಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದರು  –ಪಿಟಿಐ ಚಿತ್ರ
ಸಂಸತ್‌ ಆವರಣದಲ್ಲಿರುವ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಲು ಮಂಗಳವಾರ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಾಂಗ್ರೆಸ್ ನಾಯಕಿ, ಸೋನಿಯಾಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದರು  –ಪಿಟಿಐ ಚಿತ್ರ   

ನವದೆಹಲಿ: ಪರಿನಿರ್ವಾಣ ದಿನ ಹಿನ್ನೆಲೆಯಲ್ಲಿ ಮಂಗಳವಾರ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಕೊಡುಗೆ, ವ್ಯಕ್ತಿತ್ವವನ್ನು ಸ್ಮರಿಸಿರುವ ಕಾಂಗ್ರೆಸ್‌ ಪಕ್ಷದ ಮುಖಂಡರು, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಪಕ್ಷದ ಪರಿಶಿಷ್ಟ ಜಾತಿ, ಪಂಗಡ ವಿಭಾಗ ಇದೇ ವೇಳೆ ಯೂಟ್ಯೂಬ್ ಚಾನಲ್‌ಗೆ ಚಾಲನೆ ನೀಡಿತು. ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಸೋನಿಯಾಗಾಂಧಿ, ಅಧೀರ್‌ ರಂಜನ್‌ ಚೌಧರಿ ಪುಷ್ಪನಮನ ಸಲ್ಲಿಸಿದರು.

ಪರಿನಿರ್ವಾಣ ದಿನ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಖರ್ಗೆ ಅವರು, ‘ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯ ಚಿಂತನೆಗಳನ್ನು ಕುರಿತಂತೆ ಜನತೆ ಸಂಕಲ್ಪ ತೊಡಬೇಕು‘ ಎಂದು ಹೇಳಿದ್ದಾರೆ.

ADVERTISEMENT

ಪಕ್ಷದ ನಾಯಕ ರಾಹುಲ್‌ಗಾಂಧಿ ಅವರು, ‘ನಾವು ಮೊದಲಿಗೆ ಮತ್ತು ಅಂತಿಮವಾಗಿ ಭಾರತೀಯರು. ಎಲ್ಲರೂ ಸಮಾನರು. ಇದಕ್ಕೆ ವಿರುದ್ಧವಾದ ಯಾವುದನ್ನೂ ಒಪ್ಪಲಾಗದು’ ಎಂದಿದ್ದಾರೆ.

ಪಕ್ಷವು ‘ಅಂಬೇಡ್ಕರ್ ಅವರು ತಮ್ಮ ಬದುನ್ನು ಹಿಂದುಳಿದವರ ಸ್ವಾತಂತ್ರ್ಯ, ಏಳಿಗೆಗಾಗಿ ಮುಡಿಪಿಟ್ಟರು’ ಎಂದು ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.