ನವದೆಹಲಿ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸದ್ಯ ಹೋಂ ಕ್ವಾರಂಟೈನ್‌ನಲ್ಲಿಡಲಾಗಿದೆ.
ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಪುತ್ರರಾಗಿರುವ ಕಾರ್ತಿ ಚಿದಂಬರಂ, ಇತ್ತೀಚೆಗೆ ಅವರೊಂದಿಗೆ ಸಂಪರ್ಕದಲ್ಲಿದ್ದ ಜನರು ವೈದ್ಯಕೀಯ ಶಿಷ್ಟಾಚಾರಗಳನ್ನು ಅನುಸರಿಸುವಂತೆ ಒತ್ತಾಯಿಸಿದ್ದಾರೆ.
ಕೋವಿಡ್-19 ಪರೀಕ್ಷೆಯಲ್ಲಿ ನನ್ನ ವರದಿ ಧನಾತ್ಮಕವಾಗಿದೆ. ನನ್ನ ರೋಗಲಕ್ಷಣಗಳು ಸೌಮ್ಯವಾಗಿವೆ. ವೈದ್ಯಕೀಯ ಸಲಹೆಯ ಪ್ರಕಾರ, ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರಿಗೂ ನಾನು ವೈದ್ಯಕೀಯ ಸಲಹೆಗಳನ್ನು ಅನುಸರಿಸಲು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.