ADVERTISEMENT

ಪಂಜಾಬ್ ಜನರಿಗೆ ಕಾಂಗ್ರೆಸ್ ಈಗ ಅಪ್ರಸ್ತುತ: ಮನೀಶ್ ಸಿಸೋಡಿಯಾ

ಪಿಟಿಐ
Published 30 ಜೂನ್ 2021, 12:52 IST
Last Updated 30 ಜೂನ್ 2021, 12:52 IST
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ   

ನವದೆಹಲಿ: ‘ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಇನ್ನು ಮುಂದೆ ಜನರಿಗೆ ಅಪ್ರಸ್ತುತ' ಎಂದು ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಮತ್ತು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಮುಂದಿನ ವರ್ಷ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಎಪಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದೆ.

ಪಂಜಾಬ್‌ನಲ್ಲಿ ಕಾಂಗ್ರೆಸ್ ಸ್ಥಿತಿಗತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಕಾಂಗ್ರೆಸ್ ದೇಶದಲ್ಲಿ ಎಲ್ಲಿಯೂ ಜನರ ನಂಬಿಕೆಯನ್ನು ಉಳಿಸಿಕೊಂಡಿಲ್ಲ. ಪಕ್ಷದ ನಾಯಕತ್ವವೂ ಸೇರಿದಂತೆ ಅದರ ಹಿಂದೆ ಅನೇಕ ಕಾರಣಗಳಿವೆ' ಎಂದು ಹೇಳಿದರು.

ಕಾಂಗ್ರೆಸ್ ಕೆಲಸ ಮಾಡಲು ಅವಕಾಶವಿದ್ದ ಕಡೆಯಲ್ಲೆಲ್ಲ ನಾಯಕರು ತಮ್ಮ ತಮ್ಮಲ್ಲೇ ಜಗಳವಾಡುತ್ತಾ ಕಾಲ ಕಳೆದಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ಇದೀಗ ಪಂಜಾಬ್ ಜನರಿಗೆ ಅಪ್ರಸ್ತುತವಾಗಿದೆ ಎಂದು ಹೇಳಿದರು.

ADVERTISEMENT

ಮುಂದಿನ ವರ್ಷ ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.