ADVERTISEMENT

ಕಾಂಗ್ರೆಸ್ ಪ್ರತಿನಿಧಿಗಳು 1 ತಿಂಗಳವರೆಗೆ ಟಿ.ವಿ ಚರ್ಚೆಗಳಲ್ಲಿ ಭಾಗವಹಿಸುವಂತಿಲ್ಲ

​ಪ್ರಜಾವಾಣಿ ವಾರ್ತೆ
Published 30 ಮೇ 2019, 7:31 IST
Last Updated 30 ಮೇ 2019, 7:31 IST
 ರಣದೀಪ್ ಸುರ್ಜೇವಾಲಾ
ರಣದೀಪ್ ಸುರ್ಜೇವಾಲಾ   

ನವದೆಹಲಿ: ಕಾಂಗ್ರೆಸ್ ಜನಪ್ರತಿನಿಧಿಗಳು ಒಂದು ತಿಂಗಳವರೆಗೆ ಯಾವುದೇ ಸುದ್ದಿವಾಹಿನಿಗಳಲ್ಲಿ ಭಾಗವಹಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಅದೇ ವೇಳೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಸುರ್ಜೇವಾಲಾ ಸುದ್ದಿಮಾಧ್ಯಮಗಳಿಗೆ ಹೇಳಿದ್ದಾರೆ.

ಒಂದು ತಿಂಗಳವರೆಗೆ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ಪ್ರತಿನಿಧಿಗಳನ್ನು ಕಳಿಸುವುದಿಲ್ಲ ಎಂದು ಪಕ್ಷ ತೀರ್ಮಾನಿಸಿದೆ. ಎಲ್ಲ ಸುದ್ದಿವಾಹಿನಿಗಳು/ಸಂಪಾದಕರು ಚರ್ಚೆಗಾಗಿ ಕಾಂಗ್ರೆಸ್ ಜನ ಪ್ರತಿನಿಧಿಗಳನ್ನು ಕರೆಯಬೇಡಿ ಎಂದು ಮನವಿ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪಕ್ಷ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರಾ ಇಲ್ಲವಾ ಎಂಬುದರ ಬಗ್ಗೆ ಅನಿಶ್ಚಿತತೆ ಇದ್ದು, ಈ ಹೊತ್ತಲ್ಲೇ ಕಾಂಗ್ರೆಸ್ ಜನಪ್ರತಿನಿಧಿಗಳು ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸದಂತೆ ಕಾಂಗ್ರೆಸ್ ನಿರ್ಬಂಧ ಹೇರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.