ADVERTISEMENT

ತೈಲ ಬೆಲೆ ಏರಿಕೆ ವಿರೋಧಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್‌ ಸಿದ್ಧತೆ

ಐಶ್ವರ್ಯ ಕೇರಳ ಯಾತ್ರೆ ಉದ್ಘಾಟನೆಯಲ್ಲಿ ಪಕ್ಷದ ಹಿರಿಯ ನಾಯಕ ರಮೇಶ್

ಪಿಟಿಐ
Published 12 ಫೆಬ್ರುವರಿ 2021, 11:31 IST
Last Updated 12 ಫೆಬ್ರುವರಿ 2021, 11:31 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ಕೊಚ್ಚಿ: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಶುಕ್ರವಾರ ಇಲ್ಲಿ ತಿಳಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಅನ್ನು ಅಣಿಗೊಳಿಸುವುದಕ್ಕಾಗಿ ಕೇರಳದಾದ್ಯಂತ 'ಐಶ್ವರ್ಯ ಕೇರಳ ಯಾತ್ರೆ' ನೇತೃತ್ವವಹಿಸಿರುವ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಮೇಶ್, ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ಎರ್ನಾಕುಲಂ ಜಿಲ್ಲೆಯಲ್ಲಿ ಶುಕ್ರವಾರ ಆರಂಭವಾದ ‘ಐಶ್ವರ್ಯ ಕೇರಳ ಯಾತ್ರೆ‘ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್, ‘ಇಂಧನ ಬೆಲೆ ಏರಿಕೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ಯೋಜನೆ ರೂಪಿಸುತ್ತಿದೆ‘ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.