ADVERTISEMENT

ಪ್ರಧಾನಿ ಮೋದಿ‌ ತಮಿಳುನಾಡು ಭೇಟಿ: ಕಾಂಗ್ರೆಸ್‌ನಿಂದ ಪ್ರಶ್ನೆಗಳ ಸುರಿಮಳೆ

ತಮಿಳುನಾಡಿನಲ್ಲಿ ಬಿಜೆಪಿ ಸರ್ಕಾರ ಒಂದೇ ಒಂದು ಶಿಕ್ಷಣ ಸಂಸ್ಥೆ ಸ್ಥಾಪಿಸಿಲ್ಲ: ಜೈರಾಮ್ ರಮೇಶ್

ಪಿಟಿಐ
Published 13 ಏಪ್ರಿಲ್ 2024, 16:10 IST
Last Updated 13 ಏಪ್ರಿಲ್ 2024, 16:10 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆಗೈದಿದೆ. 

ಆಡಳಿತಾರೂಢ ಬಿಜೆಪಿ ಸರ್ಕಾರವು ಈವರೆಗೆ ದಕ್ಷಿಣದ ರಾಜ್ಯದಲ್ಲಿ ಒಂದೇ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿಲ್ಲ ಏಕೆ. ಸೇಲಂ ಉಕ್ಕು ಘಟಕವನ್ನು ಖಾಸಗಿಕರಣಗೊಳಿಸಲು ಮೋದಿ ಅವರು ಅತಿ ಉತ್ಸುಕವಾಗಿರಲು ಕಾರಣವೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ. 

ಈ ಸಂಬಂಧ ‘ಎಕ್ಸ್’ ವೇದಿಕೆಯಲ್ಲಿ ಪ್ರಶ್ನಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರಿಗೆ  ಪ್ರಶ್ನೆಗಳು: ಮದುರೈನಲ್ಲಿ ಏಮ್ಸ್ ಸ್ಥಾಪನೆ ಮಾಡುತ್ತೇವೆ ಎಂಬ ಭರವಸೆಯು ಕೇವಲ ಪ್ರಚಾರದ ಸ್ಟಂಟ್ ಆಗಿದೆಯೇ? ತಮಿಳುನಾಡಿನಲ್ಲಿ ಬಿಜೆಪಿ ಸರ್ಕಾರವು ಒಂದೇ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿಲ್ಲ ಏಕೆ’ ಎಂದು ಪ್ರಶ್ನಿಸಿದ್ದಾರೆ. 

ADVERTISEMENT

‘2015–16ರ ಬಜೆಟ್‌ನಲ್ಲಿ ಮದುರೈನಲ್ಲಿ ಏಮ್ಸ್ ಸ್ಥಾಪನೆ ಮಾಡುವುದಾಗಿ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಯೋಜನೆ ಪ್ರಕಟಿಸಿ ನಾಲ್ಕು ವರ್ಷವಾದರೂ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. 2019ರ ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಅವರು ಏಮ್ಸ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಇದಾಗಿ ಈಗ ಐದು ವರ್ಷವಾದರೂ, ಕಾಮಗಾರಿಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಇದೀಗ ಚುನಾವಣೆಗಳು ಎದುರಾಗಿದ್ದರಿಂದಾಗಿ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಗೆ ಕಾಮಗಾರಿ ಆರಂಭವಾಗಿದೆ‘ ಎಂದು  ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.