ADVERTISEMENT

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಗೆ ಜ್ವರ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಸೆಪ್ಟೆಂಬರ್ 2023, 6:02 IST
Last Updated 3 ಸೆಪ್ಟೆಂಬರ್ 2023, 6:02 IST
ಜ್ವರ: ಸೋನಿಯಾ ಆಸ್ಪತ್ರೆಗೆ ದಾಖಲು
ಜ್ವರ: ಸೋನಿಯಾ ಆಸ್ಪತ್ರೆಗೆ ದಾಖಲು   

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಜ್ವರದ ಹಿನ್ನೆಲೆಯಲ್ಲಿ ಇಲ್ಲಿನ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜ್ವರದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಮೇಲೆ ವೈದ್ಯರು ನಿಗಾವಹಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

ADVERTISEMENT

 ಕಳೆದ ಮಾರ್ಚ್‌ ತಿಂಗಳಲ್ಲಿ ಸೋನಿಯಾ ಅವರನ್ನು ಜ್ವರದ ಹಿನ್ನೆಲೆಯಲ್ಲಿ ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡೇ ದಿನಗಳಲ್ಲಿ ಗುಣಮುಖರಾಗಿ ಅವರು ಮನೆಗೆ ಮರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.