ADVERTISEMENT

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೋನಿಯಾ, ಪ್ರಿಯಾಂಕಾ, ಖರ್ಗೆ ಮತದಾನ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2022, 6:10 IST
Last Updated 17 ಅಕ್ಟೋಬರ್ 2022, 6:10 IST
ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ ಮತದಾನ: ಪಿಟಿಐ ಚಿತ್ರ
ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ ಮತದಾನ: ಪಿಟಿಐ ಚಿತ್ರ   

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯ ದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತದಾನ ಮಾಡಿದರು.

ಬೆಳಿಗ್ಗೆ 10:30ರ ಸುಮಾರಿಗೆ ಆಗಮಿಸಿದ ಸೋನಿಯಾ ಮತ್ತು ಪ್ರಿಯಾಂಕಾ ತಮ್ಮ ಅಧಿಕಾರ ಚಲಾಯಿಸಿದರು.

ಸಂಸದರಾದ ಪಿ. ಚಿದಂಬರಂ, ಜೈರಾಂ ರಮೇಶ್ ಮತ್ತು ಇತರನಾಯಕರು ಎಐಸಿಸಿ ಕಚೇರಿಯಲ್ಲಿ ಮತದಾನ ಮಾಡಿದರು.

ADVERTISEMENT

ಬೆಂಗಳೂರಿನ ಮತಕೇಂದ್ರದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಮತದಾನ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹ ಮತದಾನ ಮಾಡಿದ್ದು, ಇಲ್ಲಿ 490 ಅಭ್ಯರ್ಥಿಗಳು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇವೇಳೆ, ಮತದಾನ ಮಾಡುವ ವಿಧಾನವನ್ನೂ ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಮತದಾನ ಪ್ರಕ್ರಿಯೆ

–ಮತಪತ್ರದಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ಇರುತ್ತದೆ.

- ನೀವು ಮತ ​​ಹಾಕಲು ಬಯಸುವ ಅಭ್ಯರ್ಥಿಯ ಹೆಸರಿನ ಮುಂದೆ ☑️ ಟಿಕ್ ಮಾರ್ಕ್‌ ಮಾಡಿ.

- ಬೇರೆ ಯಾವುದೇ ಗುರುತು ಅಥವಾ ಸಂಖ್ಯೆಯನ್ನು ಬರೆದರೆ ಮತದಾನವನ್ನು ಪರಿಗಣಿಸಲಾಗುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.