ADVERTISEMENT

ಬಡಮಕ್ಕಳಿಗೆ ವಿದ್ಯಾರ್ಥಿ ವೇತನ ಸ್ಥಗಿತ: ಮೋದಿ ಪ್ರಶ್ನಿಸಿದ ಖರ್ಗೆ  

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 14:05 IST
Last Updated 30 ನವೆಂಬರ್ 2022, 14:05 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ (ಪಿಟಿಐ): ಬಡವರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಕಸಿದುಕೊಂಡು ಏನು ಸಂಪಾದಿಸಲು ಹೊರಟಿದ್ದೀರಿ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬುಧವಾರ ನರೇಂದ್ರ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ನರೇಂದ್ರ ಮೋದಿ ಜೀ, ನಿಮ್ಮ ಸರ್ಕಾರವು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ. ಬಡ ಮಕ್ಕಳಿಗೆ ಕೊಡುತ್ತಿದ್ದ ವಿದ್ಯಾರ್ಥಿ ವೇತನ ಕಸಿದುಕೊಂಡಿರುವುದರ ಅರ್ಥವೇನು? ಬಡ ಮಕ್ಕಳಿಗೆ ಕೊಡಬೇಕಾದ ಹಣ ಕಿತ್ತುಕೊಂಡು ನಿಮ್ಮ ಸರ್ಕಾರ ಎಷ್ಟು ಸಂಪಾದಿಸಲಿದೆ ಅಥವಾ ಉಳಿಸಲಿದೆ’ ಎಂದು ಖರ್ಗೆ, ಖಾರವಾಗಿ ಪ್ರಶ್ನಿಸಿದ್ದಾರೆ.

1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿ, ಇದನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ಅನ್ವಯಿಸಿ ಕೇಂದ್ರ ಸರ್ಕಾರಮಂಗಳವಾರ ಆದೇಶ ಹೊರಡಿಸಿತ್ತು. ತನ್ನ ಈ ನಿರ್ಧಾರ ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) 1ರಿಂದ 8ನೇ ತರಗತಿಯವರೆಗೆ ಮಾತ್ರ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಲಾಗುತ್ತಿದೆ ಎಂದೂ ಪ್ರತಿಪಾದಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.