
ಪಟ್ನಾ: 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಎರಡನೇ ಹಂತದ ‘ವಿಶೇಷ ಸಮಗ್ರ ಪರಿಷ್ಕರಣೆ’ ಮಾಡುವುದಾಗಿ ಘೋಷಿಸಿದ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ವಾಗ್ದಾಳಿ ನಡೆಸಿದ್ದಾರೆ.
ಬಿಹಾರ ಎಸ್‌ಐಆರ್ ವೇಳೆ ಕೇಳಿದ ಪ್ರಶ್ನೆಗೆ ಆಯೋಗ ಉತ್ತರಿಸಿಲ್ಲ ಎಂದು ಅವರು ಹೇಳಿದ್ದಾರೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆಸುವ ಮುನ್ನ ಮಾರ್ಗಸೂಚಿಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
‘ಬಿಹಾರ ಎಸ್‌ಐಆರ್ ವೇಳೆ ಉಂಟಾದ ಸವಾಲುಗಳು ಏನೆಲ್ಲಾ? ಬಿಹಾರ ಎಸ್‌ಐಆರ್ ವೇಳೆ ನಾವು ಎತ್ತಿದ ಪ್ರಶ್ನೆಗಳಿಗೆ ಚುನಾವಣಾ ಆಯೋಗದಿಂದ ನಾವು ಬಯಸುತ್ತಿದ್ದ ಉತ್ತರಗಳು ಏನಾದವು? ಆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು. ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.
ಅಲ್ಲದೆ ಬೇರೆ ರಾಜ್ಯಗಳಲ್ಲಿ ಎಸ್‌ಐಆರ್ ನಡೆಸುವಾಗ 2003ರ ಮಾರ್ಗಸೂಚಿಗಳನ್ನು ಪಾಲಿಸಲಿದೆಯೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದೂ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.