ADVERTISEMENT

ಆಪರೇಷನ್‌ ಕಮಲದ ಆಡಿಯೊ ವಿರುದ್ಧ ಕಾಂಗ್ರೆಸ್‌ ಸಂಸದರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 6:14 IST
Last Updated 11 ಫೆಬ್ರುವರಿ 2019, 6:14 IST
   

ನವದೆಹಲಿ: ಆಪರೇಷನ್‌ ಕಮಲದ ಕುರಿತ ಆಡಿಯೊವಿಚಾರವಾಗಿ ಬಿ.ಎಸ್‌.ಯಡಿಯೂರಪ್ಪ ಅವರು ತಪ್ಪೊಪ್ಪಿಕೊಂಡಿರುವ ಹಿನ್ನೆಲೆ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಸತ್‌ ಭವನದ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಸಂಸದರು ಸೇರಿದಂತೆ ಇತರೆ ಪಕ್ಷಗಳ ಸಂಸದರು ಭಾಗವಹಿಸಿದ್ದಾರೆ.

ಆಡಿಯೊದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್‌ ಷಾ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆ ಪ್ರಕರಣ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.