ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಕ್ಷಣಗಣನೆ ಆರಂಭವಾಗಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಬೆಳಗ್ಗೆ (ಆಗಸ್ಟ್ 8) 10.30ಕ್ಕೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.
ಪ್ರತಿಭಟನೆಗೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರುವ ನಿರೀಕ್ಷೆಯಿದ್ದು ಸ್ವಾತಂತ್ರ್ಯ ಉದ್ಯಾನ, ವಿಧಾನಸೌಧದ ಸುತ್ತಮುತ್ತಲ ರಸ್ತೆಗಳು, ಚಾಲುಕ್ಯ ವೃತ್ತ, ಅರಮನೆ ರಸ್ತೆ, ನೃಪ ತುಂಗ ರಸ್ತೆ, ಮೈಸೂರು ಬ್ಯಾಂಕ್ ವೃತ್ತ ಹಾಗೂ ಮೆಜೆಸ್ಟಿಕ್ ಆಸುಪಾಸಿನಲ್ಲಿ ವಾಹನ ಚಾಲಕರು ಹಾಗೂ ದ್ವಿಚಕ್ರ ವಾಹ ನಗಳ ಸವಾರರಿಗೆ ಶುಕ್ರವಾರ ದಿನವಿಡೀ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.