
ಪ್ರಿಯಾಂಕಾ ಗಾಧಿ ವಾದ್ರಾ
(ಪಿಟಿಐ ಚಿತ್ರ)
ಮೋತಿಹರಿ: 'ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಿದರೆ ಎನ್‌ಡಿಎ ಸರ್ಕಾರ ಪತನಗೊಳ್ಳುವುದು ಖಚಿತ' ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಗುರುವಾರ) ಹೇಳಿದ್ದಾರೆ.
'ರಾಜ್ಯದಲ್ಲಿ ಬಡವರು, ದಲಿತರು, ಮಹಿಳೆಯರು ಹಾಗೂ ಯುವ ಜನರ ಪರ ಕೆಲಸ ಮಾಡುವ ಸರ್ಕಾರವನ್ನು ರಚಿಸಲಾಗುವುದು' ಎಂದು ಅವರು ಭರವಸೆ ನೀಡಿದ್ದಾರೆ.
ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, 'ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ ಬಿಹಾರದ ಜನರ ಬಗ್ಗೆ ಎನ್‌ಡಿಎ ಸರ್ಕಾರಕ್ಕೆ ಕಿಂಚಿತ್ತು ಗೌರವ ಇಲ್ಲ' ಎಂದು ಟೀಕಿಸಿದ್ದಾರೆ.
'ಅಭಿವೃದ್ಧಿಗಾಗಿ ಅಲ್ಲ, ಧರ್ಮದ ಹೆಸರಿನಲ್ಲಿ ಮತಹಾಕುವಂತೆ ಬಿಜೆಪಿ ನಾಯಕರು ಜನರನ್ನು ಒತ್ತಾಯಿಸುತ್ತಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಳಪೆ ಮಟ್ಟದ ಮೂಲಸೌಕರ್ಯಕ್ಕಾಗಿ ಎನ್‌ಡಿಎ ಸರ್ಕಾರವನ್ನು ಟೀಕಿಸಿದ ಅವರು 'ಕಳೆದ ಮೂರು ವರ್ಷಗಳಲ್ಲಿ 27 ಸೇತುವೆಗಳು ಕುಸಿದಿವೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.