ADVERTISEMENT

ಫೆ.28ರಂದು ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ಬೃಹತ್‌ ಸಾರ್ವಜನಿಕ ರ‍್ಯಾಲಿ

ಪಿಟಿಐ
Published 20 ಫೆಬ್ರುವರಿ 2026, 15:18 IST
Last Updated 20 ಫೆಬ್ರುವರಿ 2026, 15:18 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

ಪಿಟಿಐ ಚಿತ್ರ

ಚಂಡೀಗಢ: ಪಂಜಾಬ್‌ನ ಬರ್ನಾಲದಲ್ಲಿ ಫೆ.28ರಂದು ಕಾಂಗ್ರೆಸ್‌ನ ಬೃಹತ್‌ ಸಾರ್ವಜನಿಕ ರ‍್ಯಾಲಿ ನಡೆಯಲಿದೆ. ಇದರಲ್ಲಿ ಲೋಕಸಭೆಯ ವಿರೋಧಪ‍ಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾಗಿಯಾಗಲಿದ್ದಾರೆ.

ADVERTISEMENT

‘ಕೇಂದ್ರ ಸರ್ಕಾರವು ನರೇಗಾವನ್ನು ಕೊನೆಗೊಳಿಸುತ್ತಿರುವುದನ್ನು ಮತ್ತು ಅಮೆರಿಕದ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದನ್ನು ವಿರೋಧಿಸಿ ಈ ರ‍್ಯಾಲಿ ನಡೆಯಲಿದೆ’ ಎಂದು ಕಾಂಗ್ರೆಸ್‌ನ ಪಂಜಾಬ್‌ ರಾಜ್ಯ ಘಟಕದ ಅಧ್ಯಕ್ಷ ಅಮರೀಂದರ್‌ ಸಿಂಗ್‌ ರಾಜಾ ವಾರಿಂಗ್‌ ಅವರು ಶುಕ್ರವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.