ADVERTISEMENT

ಟ್ರಂಪ್‌ ಹೇಳಿಕೆ ವಿಚಾರವಾಗಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 20:06 IST
Last Updated 1 ಫೆಬ್ರುವರಿ 2026, 20:06 IST
<div class="paragraphs"><p> ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

ಪಿಟಿಐ ಚಿತ್ರ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಭಾನುವಾರ ವಾಗ್ದಾಳಿ ನಡೆಸಿದೆ.

ADVERTISEMENT

‘ನಮ್ಮ ಸರ್ಕಾರ ಏನು ಮಾಡಿದೆ ಅಥವಾ ಏನು ಮಾಡಲಿದೆ ಎಂಬ ಮಾಹಿತಿ ನೀಡುವುದನ್ನು ಅಮೆರಿಕ ಅಧ್ಯಕ್ಷರು ಮುಂದುವರಿಸಿದ್ದಾರೆ’ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್‌, ‘ಟ್ರಂಪ್‌ ಅವರು ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ ಎಂದು ಹೇಳಿದ್ದರು. ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಿ‌ದೆ ಎಂದೂ ಹೇಳಿದ್ದರು. ಈಗ ವೆನೆಜುವೆಲಾದಿಂದ ತೈಲ ಖರೀದಿಗೆ ಒಪ್ಪಂದವಾಗಿದೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರದ ನಡೆಯ ಕುರಿತು ಮಾಹಿತಿ ನೀಡುವುದನ್ನು ಅವರು ಮುಂದುವರಿಸಿದ್ದಾರೆ’ ಎಂದು ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.