ADVERTISEMENT

ಕೊನೆ ಕ್ಷಣದಲ್ಲಿ ಪ್ರಣಾಳಿಕೆ ಸಮಿತಿ ರಚಿಸಿದ ಬಿಜೆಪಿ: ಕಾಂಗ್ರೆಸ್‌ ಟೀಕೆ

ಪಿಟಿಐ
Published 31 ಮಾರ್ಚ್ 2024, 2:50 IST
Last Updated 31 ಮಾರ್ಚ್ 2024, 2:50 IST
ಜೈರಾಮ್‌ ರಮೇಶ್‌
ಜೈರಾಮ್‌ ರಮೇಶ್‌   

ನವದೆಹಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕೊನೆಯ ಕ್ಷಣದಲ್ಲಿ ಬಿಜೆಪಿಯು ಪ್ರಣಾಳಿಕೆ ಸಮಿತಿಯನ್ನು ರಚಿಸಿರುವ ಬಗ್ಗೆ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಹಲವು ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗಳನ್ನು ಒಳಗೊಂಡ 27 ಸದಸ್ಯರ ಸಮಿತಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಕಾಂಗ್ರೆಸ್ ತನ್ನ ‘ಪಂಚ ನ್ಯಾಯ’, ‘ಪಚೀಸ್ ಗ್ಯಾರಂಟಿ’ಗಳನ್ನು ಮಾರ್ಚ್ 16 ರಂದು ಬಿಡುಗಡೆ ಮಾಡಿತು. ದೇಶಾದ್ಯಂತ 8 ಕೋಟಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸುವ ‘ಘರ್ ಘರ್ ಗ್ಯಾರಂಟಿ’ ಅಭಿಯಾನವು ಏಪ್ರಿಲ್ 3 ರಂದು ಪ್ರಾರಂಭವಾಗಲಿದೆ’ ಎಂದು ಹೇಳಿದರು.

ADVERTISEMENT

‘ಬಿಜೆಪಿಯ ಪ್ರಣಾಳಿಕೆಯ ರಚನೆಯನ್ನು ಕೊನೆಯ ಕ್ಷಣದಲ್ಲಿ ಪ್ರಾರಂಭಿಸುತ್ತಿದೆ. ಇದು ಪಕ್ಷವು ಸಾರ್ವಜನಿಕರನ್ನು ತಿರಸ್ಕಾರದ ಭಾವನೆಯಿಂದ ನೋಡುತ್ತಿದ್ದಾರೆ ಎನ್ನುವುದನ್ನು ಪ್ರತಿಬಿಂಬಿಸುತ್ತದೆ’ ಎಂದು ರಮೇಶ್ ಆರೋಪಿಸಿದರು.

‘ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಾಷ್ಟ್ರವ್ಯಾಪಿ ಸಮಾಲೋಚನೆ ನಡೆಸಿ ಇಮೇಲ್ ಮತ್ತು ನಮ್ಮ ‘ಆವಾಜ್ ಭಾರತ್ ಕಿ’ ವೆಬ್‌ಸೈಟ್ ಮೂಲಕ ಸಾವಿರಾರು ಸಲಹೆಗಳನ್ನು ಸ್ವೀಕರಿಸಿದ ನಂತರ ಸಿದ್ಧಪಡಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯು ಜನರ ಧ್ವನಿಯ ಪ್ರತಿನಿಧಿಯಾಗಿದೆ’ ಎಂದು ಪ್ರತಿಪಾದಿಸಿದರು.

ಅಂದಹಾಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 5 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.