ಕಾಶಿಪುರ (ಉತ್ತರಾಖಂಡ): ಉತ್ತರಾಖಂಡದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಸಿಎಂ ಹರೀಶ್ ರಾವತ್ ಅವರು, ಮುಖ್ಯಮಂತ್ರಿ ಅಭ್ಯರ್ಥಿಯನ್ನುಘೋಷಿಸುವಂತೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡುತ್ತೇವೆಎಂದು ಹೇಳಿದ್ದಾರೆ.
ಸುದ್ದಿ ಸಂಸ್ಥೆ ‘ಎಎನ್‌ಐ’ ಜತೆ ಮಾತನಾಡಿರುವ ಅವರು, ‘ಜನರು ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಇದರಿಂದಾಗಿ ಬಿಜೆಪಿಯವರು ಆತಂಕಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ’ ಎಂದಿದ್ದಾರೆ.
‘ಸಿ.ಎಂ ಅಭ್ಯರ್ಥಿಯನ್ನು ಘೋಷಿಸುವಂತೆ ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡುತ್ತೇವೆ. ಜನರು ಬಯಸುತ್ತಿರುವ ವ್ಯಕ್ತಿಯೇ ಮುಖ್ಯಮಂತ್ರಿಯಾಗಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತಮ್ಮ ಹೆಸರು ಘೋಷಿಸಿದರೆ ಪಕ್ಷದಲ್ಲಿ ಯಾರಿಂದಲೂಆಕ್ಷೇಪವಿರುವುದಿಲ್ಲ ಎಂದು ರಾವತ್ ಈ ಹಿಂದೆ ಹೇಳಿಕೊಂಡಿದ್ದರು.
ಉತ್ತರಾಖಂಡ ವಿಧಾನಸಭೆಯ 70 ಕ್ಷೇತ್ರಗಳಿಗೆ ಫೆಬ್ರುವರಿ 14ರಂದು ಮತದಾನ ನಡೆದಿತ್ತು. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.