ADVERTISEMENT

ಮೇ 13ರಿಂದ ಕಾಂಗ್ರೆಸ್‌ ನವ ಸಂಕಲ್ಪ ಶಿಬಿರ: ಸಾರ್ವತ್ರಿಕ ಚುನಾವಣೆಗೆ ಕಾರ್ಯತಂತ್ರ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2022, 13:03 IST
Last Updated 25 ಏಪ್ರಿಲ್ 2022, 13:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮೇ 13 ರಿಂದ ರಾಜಸ್ತಾನದ ಉದಯಪುರದಲ್ಲಿ 'ನವ ಸಂಕಲ್ಪ ಶಿಬಿರ' ಎಂಬ ಮೂರು ದಿನಗಳ ಚಿಂತನ-ಮಂಥನ ಸಮಾವೇಶ ನಡೆಸಲಿದೆ. ಈ ವೇಳೆ 2024ರ ಸಾರ್ವತ್ರಿಕ ಚುನಾವಣೆಯತ್ತ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಸೋಮವಾರ ತಿಳಿಸಿದೆ.

'ಕಾಂಗ್ರೆಸ್ ಅಧ್ಯಕ್ಷರು 2022ರ ಮೇ 13, 14 ಮತ್ತು 15 ರಂದು ಉದಯಪುರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 'ನವ ಸಂಕಲ್ಪ'ದ ಚಿಂತನ ಮಂಥನ ಶಿಬಿರವನ್ನು ನಡೆಸಲು ನಿರ್ಧರಿಸಿದ್ದಾರೆ. ಪ್ರತಿ ರಾಜ್ಯದಿಂದ ಸುಮಾರು 400 ಕಾಂಗ್ರೆಸ್ ಸದಸ್ಯರು ಮತ್ತು ಮಹಿಳೆಯರು ಭಾಗವಹಿಸಲಿದ್ದಾರೆ' ಎಂದು ಪಕ್ಷ ಹೇಳಿದೆ.

ಸಮಾವೇಶದಲ್ಲಿ ಸದ್ಯದ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿ ಹಾಗೂ ಅವು ನಮ್ಮ ಸಮಾಜಕ್ಕೆ ಒಡ್ಡುತ್ತಿರುವ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಲಾಗುತ್ತದೆ. ರೈತರು ಮತ್ತು ಕೃಷಿ ಕೆಲಸಗಾರರು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಸಂಬಂಧಿಸಿದ ಸಮಸ್ಯೆಗಳು, ಮಹಿಳಾ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮತ್ತು ಯುವಕರ ಬಗ್ಗೆಯೂ ವಿವರವಾಗಿ ಚರ್ಚಿಸಲಾಗುವುದು.

ADVERTISEMENT

ಇದಲ್ಲದೆ ಪಕ್ಷದ ಸಾಂಸ್ಥಿಕ ಪುನರ್‌ರಚನೆ ಮತ್ತು ಬಲಪಡಿಸುವಿಕೆಗೆ ಸಂಬಂಧಿಸಿದ ವಿಷಯಗಳನ್ನು ಸಹ ಪರಿಶೀಲಿಸಲಾಗುತ್ತದೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

2024ರ ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆಯೂ ಚಿಂತನ ಶಿಬಿರದಲ್ಲಿ ಚರ್ಚಿಸಲಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.