ಕಾಂಗ್ರೆಸ್
(ಪಿಟಿಐ ಚಿತ್ರ)
ಇಂಫಾಲ: ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್, ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುವುದಾಗಿ ಹೇಳಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಣಿಪುರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೀಶಮ್ ಮೇಘಚಂದ್ರ ಸಿಂಗ್ ಪೋಸ್ಟ್ ಮಾಡಿದ್ದು, 'ಬ್ರಹ್ಮಾಸ್ತ್ರ ಕ್ಷಿಪಣಿ ಖಂಡಿತವಾಗಿಯೂ ಡಬಲ್ ಎಂಜಿನ್‌ಗಳಲ್ಲಿ ಒಂದನ್ನು ಹೊಡೆದುರುಳಿಸುತ್ತದೆ! ಯಾವ ಕ್ಷಣ ಬೇಕಾದರೂ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಕಾಂಗ್ರೆಸ್ ಸಜ್ಜಾಗಿದೆ' ಎಂದು ತಿಳಿಸಿದ್ದಾರೆ.
ತಮ್ಮ ಪೋಸ್ಟ್ ಅನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ಟ್ಯಾಗ್ ಮಾಡಿದ್ದಾರೆ. ಆದರೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ.
60 ಸದಸ್ಯ ಬಲದ ಮಣಿಪುರದಲ್ಲಿ ಕಾಂಗ್ರೆಸ್ ಐವರು ಶಾಸಕರ ಬೆಂಬಲವನ್ನು ಹೊಂದಿದೆ. ಮಗದೊಂದು ವಿರೋಧ ಪಕ್ಷವಾದ ಎನ್‌ಪಿಪಿ ಏಳು ಶಾಸಕರನ್ನು ಹೊಂದಿದೆ.
ಬಿಜೆಪಿಗೆ 32 ಶಾಸಕರ ಬೆಂಬಲವಿದ್ದು, ನಾಗಾ ಪೀಪಲ್ಸ್ ಫ್ರಂಟ್‌ನ ಐದು ಮತ್ತು ಜೆಡಿ(ಯು) ಪಕ್ಷದ ಆರು ಶಾಸಕರ ಬೆಂಬಲವಿದೆ.
ಮೂವರು ಪಕ್ಷೇತರರು ಮತ್ತು ಕುಕಿ ಪೀಪಲ್ಸ್ ಅಲಯನ್ಸ್‌ನ ಇಬ್ಬರು ಶಾಸಕರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.