
ತಿರುವನಂತಪುರ: ಜಮಾತ್–ಎ–ಇಸ್ಲಾಮಿ ಮತ್ತು ಅದರ ರಾಜಕೀಯ ಪಕ್ಷವಾದ ವೆಲ್‌ಫೇರ್ ಪಾರ್ಟಿಯೊಂದಿಗಿನ ಸಂಬಂಧವನ್ನು ಉಲ್ಲೇಖಿಸಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಯ ವಿರುದ್ಧ ಕೇರಳ ಬಿಜೆಪಿ ಶನಿವಾರ ವಾಗ್ದಾಳಿ ನಡೆಸಿದೆ. ಈ ಹಿಂದೆ ಆಡಳಿತಾರೂಢ ಸಿಪಿಐ(ಎಂ) ಕೂಡ ಯುಡಿಎಫ್ ಅನ್ನು ಗುರಿಯಾಗಿಸಿ ಇದೇ ರೀತಿಯಲ್ಲಿ ಟೀಕಿಸಿತ್ತು.
‘ರಾಹುಲ್ ಗಾಂಧಿಯ ಕಾಂಗ್ರೆಸ್ ಮತ್ತು ಯುಡಿಎಫ್ ಮೈತ್ರಿಯು ಜಮಾತೆ–ಎ–ಇಸ್ಲಾಮಿ ಸೇರಿದಂತೆ ತೀವ್ರವಾದಿ ಇಸ್ಲಾಮಿಕ್ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕೇರಳ ಮತ್ತು ಭಾರತ ಎರಡಕ್ಕೂ ಅಪಾಯವನ್ನು ಉಂಟುಮಾಡುತ್ತಿವೆ’ ಎಂದು ಬಿಜೆಪಿಯ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.
‘ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಗಳಿಗೆ ಪ್ರಜಾಪ್ರಭುತ್ವ ಸಂಸ್ಥೆಗಳೊಳಗೆ ನುಸುಳಲು ಬಿಡಬಾರದು’ ಎಂದು ಚಂದ್ರಶೇಖರ್ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಯುಡಿಎಫ್ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಮೂಲಭೂತವಾದಿ ಸಂಘಟನೆಗಳ ಬೆಂಬಲ ಪಡೆದಿದ್ದವು ಎಂದು ಸಿಪಿಐ(ಎಂ) ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.