ADVERTISEMENT

ನಟಿ ಊರ್ಮಿಳಾ ಮಾತೋಂಡ್ಕರ್‌ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ಏಜೆನ್ಸೀಸ್
Published 29 ಮಾರ್ಚ್ 2019, 7:25 IST
Last Updated 29 ಮಾರ್ಚ್ 2019, 7:25 IST
   

ಮುಂಬೈ: ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ ಅವರನ್ನು ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧಿಕೃತಘೋಷಣೆ ಹೊರಡಿಸಿದೆ.

ಊರ್ಮಿಳಾ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ಮುಖಂಡರ ನೇತೃತ್ವದಲ್ಲಿ ಬುಧವಾರ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

2004ರಲ್ಲಿ ನಟ ಗೋವಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೇಳೆಇವರ ಎದುರಾಳಿಯಾಗಿ ಬಿಜೆಪಿ ಮುಖಂಡ ರಾಮ ನಾಯ್ಕ ನಿಂತಿದ್ದರು.

ADVERTISEMENT

ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಗೋಪಾಲ ಶೆಟ್ಟಿ ಕಣದಲ್ಲಿದ್ದಾರೆ. ಮುಂಬೈಯ ಆರು ಲೋಕಸಭಾ ಕ್ಷೇತ್ರಗಳಿಗೆ ಏ.29ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.