ADVERTISEMENT

ಹರಿಯಾಣ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಗೆಲುವು: ಮಲ್ಲಿಕಾರ್ಜುನ ಖರ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2024, 6:12 IST
Last Updated 28 ಸೆಪ್ಟೆಂಬರ್ 2024, 6:12 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಬಹುಮತ ಪಡೆದು ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಶುಕ್ರವಾರ) ಹೇಳಿದ್ದಾರೆ.

ಈ ಕುರಿತು ಸುದ್ದಿಸಂಸ್ಧೆ 'ಎಎನ್‌ಐ'ಗೆ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

'ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಜಯ ಸಾಧಿಸಲಿದ್ದೇವೆ. ಹರಿಯಾಣವಂತೂ ಗೆಲ್ಲಲಿದ್ದೇವೆ. ಜಮ್ಮು-ಕಾಶ್ಮೀರದಲ್ಲೂ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ' ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ಬಿಜೆಪಿ ಬಳಿ ದುಡ್ಡು ಇದೆ, ಅವರ ನೀತಿ ವಿಭಿನ್ನ ಅಂತ ಹೇಳುತ್ತಾರೆ. ಆದರೆ ಈಗ ಫಲಿತಾಂಶ ನಿಮ್ಮ ಮುಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಎಲ್ಲರ ಬೆಂಬಲವಿದೆ. ಕಾಂಗ್ರೆಸ್ ಪರ ಎಲ್ಲರ ಗಮನವಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವೇ ಗೆಲುವು ಗಳಿಸಲಿದೆ' ಎಂದು ಅವರು ಹೇಳಿದ್ದಾರೆ.

ಈ ಮೊದಲು ಮುಡಾ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಘೋಷಿಸಿದ್ದ ಖರ್ಗೆ, 'ಇದೊಂದು ಸಣ್ಣ ಪ್ರಕರಣ. ಆದರೂ ಈ ಬಗ್ಗೆ ಪ್ರತಿನಿತ್ಯ ಚರ್ಚಿಸಲಾಗುತ್ತಿದೆ. ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷವನ್ನು ಪ್ರತಿನಿಧಿಸುತ್ತಾರೆ. ಅವರ ಬೆಂಬಲಕ್ಕೆ ನಾನೂ ಸೇರಿದಂತೆ ಹೈಕಮಾಂಡ್‌ ನಿಂತಿದೆ' ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.