
ಪಿಟಿಐ
ಭೋಪಾಲ್: ಕಾಂಗ್ರೆಸ್ ಮುಖಂಡ ಹಾಗೂ ಮಧ್ಯಪ್ರದೇಶದ ಶಾಸಕ ರಾಮ್‌ನಿವಾಸ್ ರಾವತ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ವಾಪಸ್ ತೆಗೆದುಕೊಂಡ ಮರುದಿನ ಈ ಬೆಳವಣಿಗೆ ನಡೆದಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿ ರಾಮ್‌ನಿವಾಸ್ ಅವರು ಪಕ್ಷಕ್ಕೆ ಸೇರಿದರು. ಮೊರೆನಾ ಮೇಯರ್ ಶಾರದಾ ಸೋಲಂಕಿ ಅವರೂ ಬಿಜೆಪಿಗೆ ಸೇರ್ಪಡೆಗೊಂಡರು. ರಾಮ್‌ನಿವಾಸ್ ಅವರು ವಿಜಯ್‌ಪುರ ಕ್ಷೇತ್ರದ ಶಾಸಕರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.