ADVERTISEMENT

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತ್ರಿವಳಿ ತಲಾಖ್ ಕಾನೂನು ರದ್ದು

ಪಿಟಿಐ
Published 7 ಫೆಬ್ರುವರಿ 2019, 19:34 IST
Last Updated 7 ಫೆಬ್ರುವರಿ 2019, 19:34 IST

ನವದೆಹಲಿ: ’ನಮ್ಮ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ತ್ರಿವಳಿ ತಲಾಖ್‌ ಕಾನೂನು ರದ್ದುಪಡಿಸಲಿದೆ’ ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್‌ ಗುರುವಾರ ತಿಳಿಸಿದರು.

ಅಲ್ಪಸಂಖ್ಯಾತರ ಘಟಕ ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು‌ ತ್ರಿವಳಿ ತಲಾಖ್‌ ಕಾನೂನು ಜಾರಿ ಮಾಡುವ ಮೂಲಕ ಮುಸ್ಲಿಂ ಮಹಿಳೆಯರು ಗಂಡನ ವಿರುದ್ಧ ತಿರುಗಿಬೀಳುವ ವಾತಾವರಣ ನಿರ್ಮಿಸಿದ್ದಾರೆ ಎಂದು ಆರೋಪಿಸಿದರು.

ತ್ರಿವಳಿ ತಲಾಖ್‌ ಕಾನೂನು ಜಾರಿ ಮಾಡುವ ಮೂಲಕ ಮಹಿಳಾ ಸಬಲೀಕರಣ ಮಾಡಲಾಗುತ್ತಿದೆ ಎಂದು ಜನರು ಹುಯಿಲೆಬ್ಬಿಸುತ್ತಿದ್ದಾರೆ. ಇದರಿಂದ ಮುಸ್ಲಿಂ ಪುರುಷರನ್ನು ಜೈಲಿಗೆ ತಳ್ಳುವ ಯೋಜನೆ ರೂಪಿಸಲಾಗಿದೆ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.