ADVERTISEMENT

ನಡ್ಡಾ ನಿವಾಸ ಎದುರು ಕಾಂಗ್ರೆಸ್ ಪ್ರತಿಭಟನೆ: 15 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 11:23 IST
Last Updated 18 ಮಾರ್ಚ್ 2023, 11:23 IST
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಿವಾಸ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕರ್ಯಕರ್ತೆಯರನ್ನು ಪೊಲೀಸರು ಬಂಧಿಸಿದರು.      ಪಿಟಿಐ ಚಿತ್ರ
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಿವಾಸ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕರ್ಯಕರ್ತೆಯರನ್ನು ಪೊಲೀಸರು ಬಂಧಿಸಿದರು.      ಪಿಟಿಐ ಚಿತ್ರ   

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಘಟಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿವಾಸದ ಎದುರು ಶನಿವಾರ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ ದೆಹಲಿ ಪ್ರದೇಶ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಅಮೃತಾ ಧವನ್ ಸೇರಿದಂತೆ ಹಲವಾರು ಸದಸ್ಯರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಯಿತು.

’ನಮ್ಮ ನಾಯಕ ರಾಹುಲ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಹಾಗೂ ಸಂಸತ್‌ನಲ್ಲಿ ಮಾತನಾಡಲು ಅವಕಾಶ ನೀಡದ ಕಾರಣಕ್ಕೆ ನಡ್ಡಾ ನಿವಾಸ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಮಹಿಳಾ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ದೆಹಲಿ ಮಹಿಳಾ ಕಾಂಗ್ರೆಸ್‌ ಟ್ವಿಟ್ ಮಾಡಿದೆ.

ADVERTISEMENT

ಮೋತಿ ಲಾಲ್ ನೆಹರೂ ಸ್ಥಳದಿಂದ ಸುಮಾರು 15 ಮಹಿಳೆಯರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.