ADVERTISEMENT

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಪಕ್ಷದ ಕಾರ್ಯಕಾರಿ ಸಭೆ ಇಂದು

ದಿನಾಂಕ ನಿಗದಿ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 1:59 IST
Last Updated 28 ಆಗಸ್ಟ್ 2022, 1:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ) ಭಾನುವಾರ ಮಧ್ಯಾಹ್ನ ನಡೆಯಲಿದ್ದು ಪಕ್ಷದ ಅಧ್ಯಕ್ಷೀಯ ಚುನಾವಣೆಯ ವೇಳಾಪಟ್ಟಿ ನಿಗದಿ ಹಾಗೂ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರ ರಾಜೀನಾಮೆ ಕುರಿತು ಚರ್ಚೆ ಯಾಗುವ ಸಾಧ್ಯತೆ ಇದೆ.

ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರೊಂದಿಗೆ ಆರೋಗ್ಯ ತಪಾಸಣೆಗಾಗಿ ಲಂಡನ್‌ಗೆ ತೆರಳಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಲ್ಲಿಂದಲೇವರ್ಚುವಲ್‌ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಅವರ ಮನವೊಲಿಕೆ ವಿಫಲವಾದರೆ, ರಾಜಸ್ಥಾನದ ಮುಖ್ಯಮಂತ್ರಿಅಶೋಕ್‌ ಗೆಹಲೋತ್‌ ಅವರನ್ನುಹೆಸರಿಸುವಸಾಧ್ಯತೆಇದೆಎನ್ನಲಾಗಿದೆ.

ADVERTISEMENT

ಸೆಪ್ಟೆಂಬರ್‌ 20ರ ಒಳಗಾಗಿ ಪಕ್ಷದ ಅಧ್ಯಕ್ಷೀಯ ಚುನಾವಣೆ ನಡೆಸಬೇಕೆಂದು ಕಳೆದ ವರ್ಷ ಸಿಡಬ್ಲ್ಯುಸಿ ಸಭೆಯಲ್ಲಿ ಗಡುವು ಹಾಕಿಕೊಳ್ಳಲಾಗಿತ್ತು.

ಆದರೆ ಒಮ್ಮತದ ಅಭ್ಯರ್ಥಿ ಆಯ್ಕೆ ವಿಫಲವಾದ ಕಾರಣ ಚುನಾವಣೆ ಮತ್ತೆ ಸುಮಾರು ಮೂರು ವಾರ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.