ಸಂಬಿತ್ ಪಾತ್ರಾ
(ಪಿಟಿಐ)
ನವದೆಹಲಿ: ಕಾಂಗ್ರೆಸ್‌ನ 'ಜೈ ಹಿಂದ್ ಯಾತ್ರೆ', 'ಜೈ ಪಾಕಿಸ್ತಾನ ಯಾತ್ರೆ' ತರಹನೇ ಇದೆ ಎಂದು ಬಿಜೆಪಿ ಆರೋಪಿಸಿದೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧದ ಸಂಘರ್ಷಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ನಿರಂತರ ಟೀಕೆಗೆ ಗುರಿಯಾಗಿಸಿರುವ ಕಾಂಗ್ರೆಸ್ ನಾಯಕರ ನಿಲುವನ್ನು ಬಿಜೆಪಿ ಪ್ರಶ್ನಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ, 'ಕಾಂಗ್ರೆಸ್ ನಾಯಕರು ಪಾಕಿಸ್ತಾನದ ಯೋಧರಂತೆ ವರ್ತಿಸುತ್ತಿದ್ದಾರೆ. ಬಹುಶಃ ಪಾಕಿಸ್ತಾನದೊಂದಿಗೆ ಸಮಾಲೋಚಿಸಿ ಜಂಟಿ ಸುದ್ದಿಗೋಷ್ಠಿ ನಡೆಸಬೇಕು' ಎಂದು ಟೀಕಿಸಿದ್ದಾರೆ.
ನೆರೆಯ ರಾಷ್ಟ್ರದಲ್ಲಿ ಉಂಟಾಗಿರುವ ದಾಳಿಯ ಹಾನಿಯನ್ನು ಒತ್ತಿ ಹೇಳಿರುವ ಸಂಬಿತ್, 'ಭಾರತ ಬ್ರಹ್ಮೋಸ್ ಕ್ಷಿಪಣಿ ಬಳಸಿ ದಾಳಿ ನಡೆಸಿರುವುದಾಗಿ ಸ್ವತಃ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಸ್ನೇಹಿತ ಷರೀಫ್ ಅವರ ಮಾತನ್ನು ಕೇಳಬೇಕು' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.