ಚರಣ್‌ಜಿತ್ ಸಿಂಗ್ ಚನ್ನಿ
ನವದೆಹಲಿ: ಪುಲ್ವಾಮಾದಲ್ಲಿನ ಭಯೋತ್ಪಾದಕ ದಾಳಿ (2019) ಬಳಿಕ ಪಾಕಿಸ್ತಾನದ ವಿರುದ್ಧ ’ಸರ್ಜಿಕಲ್ ಸ್ಟ್ರೈಕ್’ ನಡೆಸಿದ್ದ ಸತ್ಯಾಸತ್ಯತೆಯನ್ನು ಕಾಂಗ್ರೆಸ್ ನಾಯಕ ಚರಣಜಿತ್ ಸಿಂಗ್ ಚನ್ನಿ ಶನಿವಾರ ಪ್ರಶ್ನಿಸಿದರು.
ಚನ್ನಿ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ ಬೆನ್ನಲ್ಲೇ, ತನ್ನ ಹೇಳಿಕೆಯಿಂದ ಹಿಂದೆ ಸರಿದ ಚೆನ್ನಿ ಅವರು ‘ಸರ್ಜಿಕಲ್ ಸ್ಟ್ರೈಕ್’ಗೆ ಯಾವುದೇ ಪುರಾವೆಗಳ ಅಗತ್ಯವಿಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಾಗಿ 10 ದಿನಗಳು ಕಳೆದರೂ ಸರ್ಕಾರ ಇಲ್ಲಿಯವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪಾಕಿಸ್ತಾನಿಗಳ ವೀಸಾಗಳನ್ನು ರದ್ದುಗೊಳಿಸುವ ಮತ್ತು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಸುವ ಕ್ರಮಗಳಿಗೆ ಯಾವುದೇ ಅರ್ಥವಿಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.