ADVERTISEMENT

ಕಾಂಗ್ರೆಸ್ ತೆರಿಗೆ ಮರುಮೌಲ್ಯಮಾಪನ: ಮಧ್ಯಪ್ರವೇಶಕ್ಕೆ ದೆಹಲಿ ಹೈಕೋರ್ಟ್‌ ನಕಾರ

ಪಿಟಿಐ
Published 28 ಮಾರ್ಚ್ 2024, 13:32 IST
Last Updated 28 ಮಾರ್ಚ್ 2024, 13:32 IST
ದೆಹಲಿ ಹೈಕೋರ್ಟ್‌ 
ದೆಹಲಿ ಹೈಕೋರ್ಟ್‌    

ನವದೆಹಲಿ: ಆದಾಯ ತೆರಿಗೆ ಇಲಾಖೆಯು(ಐ.ಟಿ) ತನ್ನ ವಿರುದ್ಧ ಆರಂಭಿಸಿರುವ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ.

2017ರಿಂದ 2021ರ ಅವಧಿಯ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಜಿ ಇದಾಗಿದೆ. 

2014–15 ಮತ್ತು 2016–17ರ ಸಾಲಿನ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಯನ್ನು ಐ.ಟಿ. ಆರಂಭಿಸಿದ್ದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಕಾಂಗ್ರೆಸ್‌ ಈ ಹಿಂದೆ ಅ‌ರ್ಜಿ ಸಲ್ಲಿಸಿತ್ತು. ವಾರದ ಹಿಂದೆಯಷ್ಟೆ ಈ ಅರ್ಜಿಯನ್ನು ತಿರಸ್ಕರಿಸಿದ್ದ ಕೋರ್ಟ್‌, ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ಈ ಪ್ರಕ್ರಿಯೆಯಲ್ಲಿ ಮೂಗುತೂರಿಸುವುದಿಲ್ಲ ಎಂದಿತ್ತು. 

ADVERTISEMENT

ಅದೇ ಮಾದರಿಯಲ್ಲಿ, 2017ರಿಂದ 21ರ ಅವಧಿಯ ಮರುಮೌಲ್ಯಮಾಪನದ ವಿಷಯದಲ್ಲೂ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಯಶವಂತ್‌ ವರ್ಮ ಮತ್ತು ಪುರುಷೇಂದ್ರ ಕುಮಾರ್‌ ಕೌರವ್‌ ಅವರಿದ್ದ ನ್ಯಾಯಪೀಠ ಹೇಳಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.