
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮಮಂದಿರ( ಸಂಗ್ರಹ ಚಿತ್ರ)
–ಪಿಟಿಐ ಚಿತ್ರ
ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯು ಜ. 22ರಂದು ಮಧ್ಯಾಹ್ನ 12.20ಕ್ಕೆ ನೆರವೇರಲಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೋಮವಾರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ ಬಳಿಕ ಆರತಿ ಬೆಳಗಲಾಗುವುದು ಎಂದು ಚಂಪತ್ ರಾಯ್ ಮಾಹಿತಿ ಹಂಚಿಕೊಂಡಿದ್ದಾರೆ.
ಈ ವಿಶೇಷ ದಿನದ ಪ್ರಯುಕ್ತ ಗ್ರಾಮ ಹಾಗೂ ನಗರ ಪ್ರದೇಶದಗಳಲ್ಲಿನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಬೇಕು. ಸೂರ್ಯಾಸ್ತದ ಬಳಿಕ ದೀಪಗಳನ್ನು ಬೆಳಗಿಸಬೇಕು ಎಂದು ಪ್ರಧಾನಿಯವರು ಮನವಿ ಮಾಡಿದ್ದರು ಎಂದು ರಾಯ್ ಹೇಳಿದ್ದಾರೆ.
ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ರಾಯ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.