ADVERTISEMENT

ಅಸ್ಸಾಂ: ಡಿ. 15ರಿಂದ ಶಾಲಾ– ಕಾಲೇಜು ಆರಂಭ

ಕೋವಿಡ್ ಪ್ರಕರಣಗಳ ಇಳಿಕೆ: ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 11:34 IST
Last Updated 30 ನವೆಂಬರ್ 2020, 11:34 IST

ಗುವಾಹಟಿ: ಅಸ್ಸಾಂನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ಡಿ. 15ರಂದು 10,12ನೇ ತರಗತಿ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಶಾಲಾ–ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಇಳಿಕೆಯಾಗಿರುವ ಕಾರಣ ಅಸ್ಸಾಂನಲ್ಲಿನ ತಾತ್ಕಾಲಿಕ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ, ರಾಜ್ಯದಲ್ಲಿ ‌ಪ್ರಾಥಮಿಕ ಶಾಲೆಗಳನ್ನು ಜನವರಿ 1ರಿಂದ ಪುನರಾರಂಭಿಸಲು ತೀರ್ಮಾನಿಸಲಾಗುವುದು. ಅಗತ್ಯ ಸುರಕ್ಷತಾ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT