ADVERTISEMENT

ಸಂವಿಧಾನಕ್ಕೆ ಅಸ್ತಿತ್ವದ ಪ್ರಶ್ನೆ, ದೇಶ ಒಕ್ಕೂಟ ರಾಷ್ಟ್ರವಾಗಿ ಉಳಿಯದು: ಖರ್ಗೆ

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ

ಪಿಟಿಐ
Published 26 ನವೆಂಬರ್ 2022, 16:04 IST
Last Updated 26 ನವೆಂಬರ್ 2022, 16:04 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು, ‘ಸಂವಿಧಾನವು ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದ್ದು, ದೇಶವು ಇನ್ನು ಮುಂದೆ ಒಕ್ಕೂಟ ರಾಷ್ಟ್ರವಾಗಿ ಉಳಿಯದು’ ಎಂದು ಅತಂಕ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ದಿನದ ನಿಮಿತ್ತ ನೀಡಿರುವ ಹೇಳಿಕೆಯಲ್ಲಿ ‘2014ರಲ್ಲಿ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ, ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್‌) ಅಧಿಕಾರವನ್ನು ಸಂವಿಧಾನವು ನೀಡಿರುವ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಬಳಸುತ್ತಿದೆ’ ಎಂದು ಆರೋಪಿಸಿದ್ದಾರೆ.

‘ಭಾರತೀಯ ಸಂವಿಧಾನದ ಬಿಕ್ಕಟ್ಟು’ ಶೀರ್ಷಿಕೆಯಡಿಯಲ್ಲಿ ಹೇಳಿಕೆ ನೀಡಿರುವ ಅವರು, ‘ಏಳು ದಶಕಗಳಿಂದ ಕಾಲದ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ಸಂವಿಧಾನಕ್ಕೆ ಇಂದು ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಾಗಿದೆ’ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.