ನರೇಂದ್ರ ಮೋದಿ
(ಪಿಟಿಐ ಚಿತ್ರ)
ನವದೆಹಲಿ: ಸಂವಿಧಾನ ಅಂಗೀಕರಿಸಿ 75 ವರ್ಷಗಳು ಪೂರ್ಣಗೊಂಡ ಸಂದರ್ಭದಲ್ಲಿ ಈ ಕುರಿತು ಲೋಕಸಭೆಯಲ್ಲಿ ಎರಡು ದಿನಗಳ ಚರ್ಚೆಯಲ್ಲಿ ಭಾಗವಹಿಸಿ ಇಂದು (ಶನಿವಾರ) ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 'ನಮ್ಮ ಒಗ್ಗಟ್ಟಿಗೆ ಸಂವಿಧಾನವೇ ಆಧಾರ' ಎಂದು ಹೇಳಿದ್ದಾರೆ.
ಭಾರತವು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮಾತ್ರವಲ್ಲದೆ 'ಪ್ರಜಾಪ್ರಭುತ್ವದ ತಾಯಿ' ಆಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
1949ರಲ್ಲಿ ಸಂವಿಧಾನ ಅಂಗೀಕರಿಸಿರುವುದನ್ನು 'ಶ್ರೇಷ್ಠ' ಎಂದು ಬಣ್ಣಿಸಿರುವ ಮೋದಿ, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಜಗತ್ತಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದ್ದಾರೆ.
'2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಳು ಸಂಕಲ್ಪ ಮಾಡಿದೆ. ಈ ಗುರಿ ಸಾಧಿಸಲು ಒಗ್ಗಟ್ಟು ಅತಿ ಮುಖ್ಯವಾಗಿದೆ' ಎಂದು ಹೇಳಿದ್ದಾರೆ.
ನರೇಂದ್ರ ಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.