ಕೊಚ್ಚಿ: ಭಾರತೀಯ ಸಂವಿಧಾನದ ಪೀಠಿಕೆಯು ತಂದೆ–ತಾಯಿ ಇದ್ದಂತೆ. ಎಷ್ಟೇ ಪ್ರಯತ್ನಿಸಿದರೂ ಅದನ್ನು ಬದಲಿಸಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.
ಕೊಚ್ಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.
‘ಐತಿಹಾಸಿಕವಾಗಿ ಯಾವುದೇ ದೇಶದ ಸಂವಿಧಾನದ ಪೀಠಿಕೆಯನ್ನು ಇದುವರೆಗೆ ಬದಲಾಯಿಸಲಾಗಿಲ್ಲ. ಆದರೆ, ನಮ್ಮ ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಲಾಗಿದೆ’ ಎಂದು ಬೇಸರ ಹೊರಹಾಕಿದ್ದಾರೆ.
ನಮ್ಮ ಸಂವಿಧಾನದ ಪೀಠಿಕೆಯನ್ನು ಸಾವಿರಾರು ಜನರು ಜೈಲಿನಲ್ಲಿದ್ದ ಸಂದರ್ಭದಲ್ಲಿ ಬದಲಾಯಿಸಲಾಗಿದೆ. ಇದು ನಮ್ಮ ಪ್ರಜಾಪ್ರಭುತ್ವದ ‘ಕರಾಳ ಅವಧಿ’ ಎಂದು ಅವರು ಹೇಳಿದ್ದಾರೆ.
‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಎಂಬ ಪದಗಳು ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಇರಲಿಲ್ಲ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅವುಗಳನ್ನು ಸೇರಿಸಲಾಗಿದೆ ಎಂದು ಆರ್‌ಎಸ್‌ಎಸ್ ನೀಡಿರುವ ಹೇಳಿಕೆಗೆ ಪೂರಕವಾಗಿ ಧನಕರ್ ಈ ಹೇಳಿಕೆಯನ್ನು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.