ಮಲ್ಲಿಕಾರ್ಜುನ ಖರ್ಗೆ
(ಪಿಟಿಐ ಚಿತ್ರ)
ಜುನಾಗಢ: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ಕಾಂಗ್ರೆಸ್‌ನ ಪ್ರಮುಖ ಜವಾಬ್ದಾರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದು, ಅಧಿಕಾರದಲ್ಲಿರುವವರು ಅದನ್ನು ರಕ್ಷಿಸುವ ಕಾರ್ಯವನ್ನು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಗುಜರಾತ್ ಕಾಂಗ್ರೆಸ್‌ನ ಜಿಲ್ಲಾ ಮತ್ತು ನಗರ ಅಧ್ಯಕ್ಷರುಗಳಿಗಾಗಿ ಇಲ್ಲಿ ಆಯೋಜಿಸಿದ್ದ 10 ತರಬೇತಿ ಶಿಬಿರವನ್ನು ಉದ್ಘಾಟಿಸುವ ಮುನ್ನು ಅವರು ಸುದ್ದಗಾರರೊಂದಿಗೆ ಅವರು ಮಾತನಾಡಿದರು.
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಪರೋಕ್ಷ ದಾಳಿ ನಡೆಸಿದ ಅವರು, ಅವರಿಬ್ಬರಿಗೂ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದು ಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎದುರಿಸುವುದು ಸಾಮಾನ್ಯ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವುದು ನಮ್ಮ ಪ್ರಮುಖ ಜವಾಬ್ದಾರಿ. ಗುಜರಾತ್ ಎಂಬುದು ಮಹಾತ್ಮ ಗಾಂಧಿ ಮತ್ತು ವಲ್ಲಭಭಾಯಿ ಪಟೇಲ್ ಅವರು ಹುಟ್ಟಿರುವ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿರುವ ನಾಡು. ಅವರಿಂದಾಗಿ ದೇಶವು ಸ್ವಾತಂತ್ರ್ಯಗೊಂಡು ಒಗ್ಗಟ್ಟಾಗಿದ್ದು, ಅದಕ್ಕಾಗಿ ಅವರು ಗೌರವಕ್ಕೆ ಪಾತ್ರರು’ ಎಂದು ಖರ್ಗೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.