ADVERTISEMENT

ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳ ಮೇಲೆ ಮತ್ತೆ ನಿಷೇಧ: ಸಚಿವ ಗೋಪಾಲ್ ರಾಯ್

ಪಿಟಿಐ
Published 25 ನವೆಂಬರ್ 2021, 11:18 IST
Last Updated 25 ನವೆಂಬರ್ 2021, 11:18 IST
ಸಚಿವ ಗೋಪಾಲ್‌ ರಾಯ್
ಸಚಿವ ಗೋಪಾಲ್‌ ರಾಯ್   

ನವದೆಹಲಿ: ‘ಸುಪ್ರೀಂಕೋರ್ಟ್‌ ಆದೇಶದಂತೆ ರಾಷ್ಟ್ರ ರಾಜಧಾನಿಯಲ್ಲಿ ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮಗೊಳಿಸುವ ಚಟುವಟಿಕೆಗಳ ಮತ್ತೆ ನಿಷೇಧ ಹೇರಲು ನಿರ್ಧರಿಸಲಾಗಿದೆ’ ಎಂದು ದೆಹಲಿ ಪರಿಸರ ಸಚಿವ ಗೋಪಾಲ್‌ ರಾಯ್‌ ಗುರುವಾರ ತಿಳಿಸಿದರು.

‘ಈ ನಿಷೇಧ ಗುರುವಾರದಿಂದಲೇ ಜಾರಿಯಾಗಲಿದೆ. ಈ ಕ್ರಮದಿಂದ ಕಾರ್ಮಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಕಾರಣ, ಅವರಿಗೆ ಹಣಕಾಸು ನೆರವು ನೀಡಲು ನಿರ್ಧರಿಸಲಾಗಿದೆ. ಈ ಸಂಬಂಧ ಯೋಜನೆ ರೂಪಿಸುವಂತೆ ಕಾರ್ಮಿಕ ಇಲಾಖೆಗೆ ಸೂಚನೆ ನೀಡಲಾಗಿದೆ’ ಎಂದು ಅವರು ಹೇಳಿದರು.

ದೆಹಲಿಯಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ಮತ್ತೆ ನಿಷೇಧ ಹೇರಿ ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿತ್ತು. ಆದರೆ, ವಾಯು ಮಾಲಿನ್ಯಕ್ಕೆ ಕಾರಣವಾಗದಂತಹ ಪ್ಲಂಬಿಂಗ್‌, ಕಟ್ಟಡಗಳ ಒಳಾಂಗಣ ಅಲಂಕಾರ, ವಿದ್ಯುತ್‌ ಸಂಪರ್ಕ ಹಾಗೂ ಮರಗೆಲಸದಂತಹ ಕಾರ್ಯಗಳಿಗೆ ಅನುಮತಿ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.